ಮಾನ್ವಿ : ಎನ್ನೆಸ್ಸೆಸ್ ಶಿಬಿರಗಳಿಂದಾಗಿ ಗ್ರಾಮೀಣ ಪ್ರದೇಶದ ಜನರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ಕಲ್ಮಠದ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಪಾಟೀಲ್ ತಿಳಿಸಿದರು.
ತಾಲೂಕಿನ ಸಾದಾಪುರ ಗ್ರಾಮದಲ್ಲಿ ಸೋಮವಾರ ಕಲ್ಮಠ ಪದವಿ ಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಭಾಗದ ಜನರ ಜೀವನ ಅರ್ಥವಾಗುತ್ತದೆ. ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಡಿ.ಇಡಿ ಕಾಲೇಜಿನ ಪ್ರಾಚಾರ್ಯ ಸಿದ್ದಮಲ್ಲಯ್ಯ, ಸಾದಾಪುರ ಗ್ರಾಮದ ಮುಖಂಡ ಸತ್ಯನಾರಾಯಣಗೌಡ ಧ್ವಜಾರೋಹಣ ನೆರವೇರಿಸಿದರು. ಗ್ರಾಪಂ ಅಧ್ಯಕ್ಷ ತಿಮ್ಮಪ್ಪ ನಾಯಕ, ಶಾಲೆಯ ಮುಖ್ಯಶಿಕ್ಷಕ ಯಮನಪ್ಪ, ಶಿಕ್ಷಕಿ ಶರಣಮ್ಮ, ಅಧಿಕಾರಿ ಆನಂದ ಉಪ್ಪಲ್ ಇದ್ದರು.