ದೇವರಹಿಪ್ಪರಗಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹಬಾಳ್ವೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಮಹತ್ವದ ಪಾತ್ರ ವಹಿಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಹೇಳಿದರು.
ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಏಳು ದಿನಗಳವರೆಗೆ ಆಯೋಜಿಸಿದ್ದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ. ಬಿರಾದಾರ ಮಾತನಾಡಿ, ಗಾಂಧೀಜಿಯವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅಸ್ತಿತ್ವಕ್ಕೆ ಬಂದ ರಾಷ್ಟ್ರೀಯ ಸೇವಾ ಯೋಜನೆ ಸದೃಢ ಹಾಗೂ ಸಶಕ್ತ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕಾರ್ಯಕ್ರಮ ಅಧಿಕಾರಿ ಶಿವಪುತ್ರ ಜಾಲವಾದಿ ವರದಿ ವಾಚಿಸಿದರು.
ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಐ.ಎಸ್. ನರೂಣಿ, ಸಹಶಿಕ್ಷಕ ಎ.ಎಸ್. ವಾಲೀಕಾರ, ಕೆಜಿಎಸ್ ಶಾಲೆ ಮುಖ್ಯಶಿಕ್ಷಕ ಎಸ್.ಆರ್. ಪಾಟೀಲ, ಮುತ್ತು ಮೆಳ್ಳಿಗೇರಿ ಮಾತನಾಡಿದರು.
ಸಹ ಕಾರ್ಯಕ್ರಮಾಧಿಕಾರಿ ಎಂ.ಎಂ. ಲಕ್ಷ್ಮೀಶ, ಪುಷ್ಪಾ ಹುಣಶ್ಯಾಳ, ಬಿ.ಎಸ್. ಬಿರಾದಾರ, ಸಾವಿತ್ರಿ ಮದಭಾವಿ, ಕಾಲೇಜಿನ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಇದ್ದರು.