ಜಿಲ್ಲೆ

ಗೋಣಿಕೊಪ್ಪಲಿನಲ್ಲಿ ಎನ್‌ಎಸ್‌ಎಸ್‌ನಿಂದ ಪರಿಸರ ದಿನ

ಗೋಣಿಕೊಪ್ಪಲು: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾಲೇಜು ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.

ಉಪ ಪ್ರಾಂಶುಪಾಲರಾದ ಪ್ರೊ.ಎಂ.ಎಸ್. ಭಾರತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಾರೂಢ ಸಿಂಗಾಡಿ, ಅಧೀಕ್ಷಕಿ ಟಿ.ಕೆ. ಲತಾ, ಎನ್‌ಎಸ್‌ಎಸ್ ಅಧಿಕಾರಿಗಳಾದ ಎಂ.ಎ.ಕುಶಾಲಪ್ಪ, ಪೂಜಾ. ಕೆ.ಎಸ್., ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.