ಜಿಲ್ಲೆ

ಪೋಷಣ ಅಭಿಯಾನ, ಪೌಷ್ಟಿಕ ಆಹಾರ ಶಿಬಿರ

ಇಂದಿರಾ ಎನ್ ಕೆ

ಕೋಟ: ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಬುಧವಾರ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಿತು.

ಸಮುದಾಯ ಆರೋಗ್ಯ ಕೇಂದ್ರ ಕೋಟ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೋಟತಟ್ಟು ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ ಚಂದ್ರಕಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲಕ್ಷ್ಮೀ ಇಲಾಖೆಯಿಂದ ಕೊಡಮಾಡುವ ಪೂರಕ ಆಹಾರಗಳ ಉಪಯೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿ ಅಧ್ಯಕ್ಷ ವನಜಾ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರು, ಪಾಲಕರು, ಸ್ತ್ರೀ ಶಕ್ತಿ ಸದಸ್ಯರು, ಬಾಲವಿಕಾಸ ಸಮಿತಿ ಸದಸ್ಯರು, ಅಂಗನವಾಡಿ ಫಲಾನುಭವಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.