ಬಾದಾಮಿಯ ಎಸ್.ಬಿ. ಚನ್ನಪ್ಪಗೌಡರ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮದಲ್ಲಿ ತಾಪಂ ಅಧಿಕಾರಿ ಮುತ್ತು ಓಲೆಕಾರ ಮಾತನಾಡಿದರು. ಶ್ರೀಧರ ಪತ್ತೇಪೂರ, ಪಿ.ಎ. ಹಿರೇಮಠ, ಎನ್.ಬಿ. ಶೀಲವಂತ ಇತರರಿದ್ದರು. 
ಜಿಲ್ಲೆ

ಮಕ್ಕಳ ಬೆಳವಣಿಗೆಗೆ ಪೋಷಣ ಯೋಜನೆ

ದತ್ತಾತ್ರೇಯ ಪಿ ಕುಲಕರ್ಣಿ

ಬಾದಾಮಿ: ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಿ ಭೌತಿಕ ಹಾಗೂ ಮಾನಸಿಕ ಬೆಳವಣಿಗೆ ಸದೃಢಗೊಳಿಸುವಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಉಪಯುಕ್ತವಾಗಿದೆ ಎಂದು ತಾಪಂ ಅಧಿಕಾರಿ ಮುತ್ತು ಓಲೇಕಾರ ಹೇಳಿದರು.

ಪಟ್ಟಣದ ಎಸ್.ಬಿ. ಚನ್ನಪ್ಪಗೌಡರ ಬಾಲಕಿಯರ ಪ್ರೌಢಶಾಲೆಯಲ್ಲಿ ಬೆಂಗಳೂರಿನ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಜಿಪಂ, ತಾಪಂ ಹಾಗೂ ಸಾಮಾಜಿಕ ಪರಿಶೋಧನಾ ತಾಲೂಕು ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ರೂಪಿತವಾದ ಈ ಯೋಜನೆಯಿಂದ ಮಕ್ಕಳ ಶಾಲಾ ದಾಖಲಾತಿ ಹಾಗೂ ಹಾಜರಾತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎಂ. ಹಿರೇಮಠ ಮಾತನಾಡಿ, ಮಕ್ಕಳ ಭವಿಷ್ಯ ಉನ್ನತೀಕರಿಸುವ ಸದುದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಮಕ್ಕಳು ಅವುಗಳ ಪ್ರಯೋಜನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ರೇಷ್ಮೆ ವಿಸ್ತರಣಾಧಿಕಾರಿ ರಾಜಶೇಖರ್ ವಾಲಿ ಮಾತನಾಡಿದರು.

ಸಂಸ್ಥೆ ಗೌರವ ಕಾರ್ಯದರ್ಶಿ ಶ್ರೀಧರ ಪತ್ತೇಪೂರ, ಮುಖ್ಯಶಿಕ್ಷಕ ಪಿ.ಎ ಹಿರೇಮಠ, ಎನ್.ಬಿ. ಶೀಲವಂತ, ಶಿಕ್ಷಕ ಜೆ.ಎಂ. ಮಿಟ್ಟಲಕೋಡ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.