ಬಾಳೆಹೊನ್ನೂರು: ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಗುರಿ ಎಂದು ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳು ದೊರೆಯುತ್ತಿವೆ. ಗುಣಮಟ್ಟದ ಶಿಕ್ಷಣ ಹಾಗೂ ಯಾವುದೇ ಕೊರತೆ ಬಾರದಂತೆ ವಿದ್ಯಾರ್ಥಿಗಳನ್ನು ನೋಡಿಕೊಳ್ಳುವುದು ಸರ್ಕಾರದ ಗುರಿ. ವಿದ್ಯಾರ್ಥಿಗಳು ಸರ್ಕಾರಿ ಸವಲತ್ತು ಬಳಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಎಸ್‌ಡಿಎಂಸಿ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ, ಗ್ರಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಇಬ್ರಾಹಿಂ ಶಾಫಿ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಒ.ಡಿ.ಸ್ಟೀಫನ್, ಮುಖ್ಯಶಿಕ್ಷಕ ಕೊಟ್ರೇಶಪ್ಪ ಇತರರಿದ್ದರು.