ಹುಬ್ಬಳ್ಳಿ: ಇಲ್ಲಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಗುರುವಾರ ವಿವಿಧ ಕಾರ್ಮಿಕ ಸಂಘಟನೆಗಳು, ಪರಿಶಿಷ್ಟ ಜಾತಿ, ಪಂಗಡ ನೌಕರರ ಸಂಗಳ ಪದಾಧಿಕಾರಿಗಳೊಂದಿಗೆ ಕುಂದುಕೊರತೆ ಸಭೆ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು, ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು. ನೌಕರರ ಮನವಿ ಪರಿಶೀಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ಉಪಾಧ್ಯಕ್ಷ ಐ.ಎಸ್. ಮಧುವಾಲ, ಪ್ರಧಾನ ಕಾರ್ಯದರ್ಶಿ ಜಿ. ಪ್ರಕಾಶಮೂರ್ತಿ, ನೌಕರರ ಸಂಘದ ಅಧ್ಯಕ್ಷ ಜಿ.ಸಿ. ಕಮಲದಿನ್ನಿ, ಡಿ. ಪ್ರಸಾದ, ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ವಾಯವ್ಯ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ. ನಾಯಕ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ವಿಜಯಶ್ರೀ ನರಗುಂದ, ಮುಖ್ಯ ಕಾನೂನು ಅಧಿಕಾರಿ ಪ್ರಸನ್ನಕುಮಾರ ಬಾಳಾನಾಯಕ, ಮುಖ್ಯ ಯಾಂತ್ರಿಕ ಅಭಿಯಂತರ ಬಸವರಾಜ ಅಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಜಗದಂಬಾ ಕೋಪರ್ಡೆ, ಅಧಿಕಾರಿಗಳು ಉಪಸ್ಥಿತರಿದ್ದರು.