ಜಿಲ್ಲೆ

ಪ್ರಜಾಪ್ರಭುತ್ವದ ಆಶಯ ಈಡೇರಿಕೆಗೆ ಬದ್ಧ

Davangere - Desk - Basavaraja P

ಶಾಸಕ ಡಿ.ಜಿ.ಶಾಂತನಗೌಡ ಹೇಳಿಕೆ I ಮಾನವ ಸರಪಳಿ ನಿರ್ಮಾಣ

ನ್ಯಾಮತಿ: ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರ್ಕಾರ 2500 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಐತಿಹಾಸಿಕ ಮೈಲುಗಲ್ಲು ಸೃಷ್ಟಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.

ತಾಲೂಕಿನ ಗಡಿ ಭಾಗದ ಟಿ.ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸಂವಿಧಾನದ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರವು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಿದೆ ಎಂದರು.

ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ನಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.

ತಾಪಂ ಇಒ ಎಚ್.ವಿ.ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಚ್.ಎಲ್.ಉಮಾ ಮಾತನಾಡಿದರು.

ಉಪ ವಿಭಾಗಾಧಿಕಾರಿ ವಿ.ಅಭಿಷೇಕ್, ತಹಸೀಲ್ದಾರ್ ಗೋವಿಂದಪ್ಪ, ಹೊನ್ನಾಳಿ ಇಒ ಎಂ.ಆರ್.ಪ್ರಕಾಶ್, ಡಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಿ.ಜಿ.ವಿಶ್ವನಾಥ್, ಡಿ.ಎಸ್.ಸುರೇಂದ್ರಗೌಡ, ಕಾಂಗ್ರೆಸ್ ಮುಖಂಡ ಎಚ್.ಎ.ಉಮಾಪತಿ, ಪೊಲೀಸ್ ಇನ್ಸ್‌ಪೆಕ್ಟರ್ ರವಿ, ಪಿಡಿಒ ರಶ್ಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್, ಸ್ಫೂರ್ತಿ ಸಂಸ್ಥೆಯ ಮುಖ್ಯಸ್ಥ ರೂಪ್ಲಾನಾಯ್ಕಾ ಇತರರಿದ್ದರು.

ಲಘು ಉಪಾಹಾರದ ವ್ಯವಸ್ಥೆ: ನ್ಯಾಮತಿ ತಾಲೂಕಿನ ಟಿ.ಜಿ.ಹಳ್ಳಿ, ಚೀ.ಕಡದಕಟ್ಟೆ, ಚೀಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ತಾಲೂಕು ಪಂಚಾಯಿತಿ ಇಒ ಎಚ್.ವಿ.ರಾಘವೇಂದ್ರ ಪರಿಶೀಲನೆ ನಡೆಸಿದರು. ಚೀಲೂರು ಗ್ರಾಪಂ ಅಧ್ಯಕ್ಷೆ ಕೆ.ರೂಪಾ, ಉಪಾಧ್ಯಕ್ಷೆ ನಾಗಮ್ಮ, ಸದಸ್ಯರಾದ ಚಂದ್ರಶೇಖರಯ್ಯ, ಹಾಲೇಶಪ್ಪ, ಸತೀಶ್, ಪ್ರಸನ್ನ, ಮಲ್ಲೇಶ್, ಚೈತ್ರಾ, ಧನಲಕ್ಷ್ಮಿ, ಲಕ್ಷಿ ್ಮೀದೇವಿ, ಪಿಡಿಒಗಳಾದ ಯೋಗೇಶ್ ನಾಯ್ಕ, ವಿಜಯ್, ಕಾರ್ಯದರ್ಶಿ ಮಂಜುಳಾ ಇತರರಿದ್ದರು.