ಜಿಲ್ಲೆ

ಪ್ರತಿಜ್ಞಾ ವಿಧಿ ಸ್ವೀಕಾರ

ಮಡಿಕೇರಿ:
ಮಡಿಕೇರಿ ಎಫ್.ಎಂ.ಸಿ. ಕಾಲೇಜು ಸಭಾಂಗಣದಲ್ಲಿ ಪರಿಸರ ಸಂರಕ್ಷಣಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು ಜಂಟಿ ಆಶ್ರಯದಲ್ಲಿ ಸೋಮವಾರ ಪರಿಸರ ಸಂರಕ್ಷಣೆ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಪರಿಸರ ಅಧಿಕಾರಿ ಎಂ. ಜಿ. ರಘುರಾಮ್ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಘಟಕ ಯು. ಸಿ. ದಮಯಂತಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಲೇಜಿನ ಪ್ರಾಂಶುಪಾಲ ಮೇ. ಡಾ. ರಾಘವ ಬಿ., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಆಯುಕ್ತ ಬೇಬಿ ಮ್ಯಾಥ್ಯೂ ಎಂ. ಎ. ಕೊಡವ ಸಂಯೋಜಕರಾದ ಮೇಚಿರ ರವಿಶಂಕರ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಮಡಿಕೇರಿ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಅಜ್ಜಮಕ್ಕಡ ಎಂ. ವಿನುಕುಮಾರ್, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಂತರ ಮಡಿಕೇರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಜವರಪ್ಪ ಮತ್ತು ರೇಂಜರ್ ಲೀಡರ್ ನಮಿತಾ ಹಾಗೂ ರೇಂಜರ್ಸ್‌ಗಳು ಮತ್ತು ಕಾಲೇಜು ವಿದ್ಯಾರ್ಥಿನಿಯರು ಪ್ರತಿಜ್ಞಾನಿಧಿ ಸ್ವೀಕರಿಸಿದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ನಿರ್ಮಲಾ, ಓವರ್ ಲೀಡರ್ ಎವರೆಸ್ಟ್ ಲಾಡ್ರಿಗಸ್, ರೇಂಜರ್ ಲೀಡರ್ ಕುಸುಮಾ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಮತದಾನದ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು.