ಬೆಂಗಳೂರು: ಇಂದು (ಸೆ.11) ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಮೇಶ್ ಬಾಬು, ಆರತಿ ಕೃಷ್ಣ ಎಫ್.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಈ ಬಾರಿ ಹಮಾಸ್ ಉಗ್ರ ನಾಯಕರು ಸಿಗದಿದ್ದರೆ, ಮುಂದಿನ ದಾಳಿಯಲ್ಲಿ ಹೊಡೆಯುತ್ತೇವೆ: ಇಸ್ರೇಲ್| Israel
ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಈ ನಾಲ್ವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿತ್ತು. ಅದರಂತೆ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಈ ನಾಲ್ವರು ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.
ಇನ್ನೂ ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ, ಡಿ.ಕೆ ಶಿವಕುಮಾರ್ ಸೇರಿದಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು, ಕಾನೂನು ಸಚಿವ ಎಚ್.ಕೆ. ಪಾಟೀಲ್, ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗಿಯಾಗಿದ್ದರು.
(ಏಜೆನ್ಸೀಸ್)