ಹಾವೇರಿ: ದಿವಂಗತ ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಪ್ರಯುಕ್ತ ಶನಿವಾರ ಬೆಳಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮ ಜರುಗಿತು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಏಕತಾ ದಿನ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ, ‘ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ. ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯ್ ಪಟೇಲ್ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆ ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ’ ಎಂದು ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ, ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ಸಿಇಒ ರಮೇಶ ದೇಸಾಯಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ನಾಗರಾಜ್ ಇತರರು ಪಾಲ್ಗೊಂಡಿದ್ದರು.