ಯಲಬುರ್ಗಾ: ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯ ಬಗ್ಗೆ ರೈತರಿಂದ ಆಕ್ಷೇಪಣೆಗಳು ಬಂದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ರೈತರ ಜಮೀನುಗಳಿಗೆ ತೆರಳಿ ಮಂಗಳವಾರ ಮರುಪರಿಶೀಲನೆ ನಡೆಸಿದರು.
2019ರಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಕುರಿತು ರೈತರಿಂದ ಬಂದ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಕಾರ್ಯ ತಂಡ ರಚಿಸಲಾಗಿದೆ. ತಂಡದೊಂದಿಗೆ ತಹಸೀಲ್ದಾರ್ ಶ್ರೀಶೈಲ ತಳವಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕ ಶರಣಪ್ಪ ಗುಂಗಾಡಿ ಯಲಬುರ್ಗಾ ಹಾಗೂ ಹಿರೇವಂಕಲಕುಂಟಾ ಹೋಬಳಿ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಮರುಪರಿಶೀಲನೆ ನಡೆಸಿದರು. ಕೃಷಿ ಅಧಿಕಾರಿ ಪಂಪಾಪತಿ, ಪಿಆರ್, ಗ್ರಾಮ ಲೆಕ್ಕಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ರೈತರು ಇದ್ದರು.