ವಿರಾಜಪೇಟೆ: ಇಲ್ಲಿನ ಕಾವೇರಿ ಪದವಿ ಕಾಲೇಜಿನಿಂದ ನಗರದವರೆಗೆ ನಡೆಯುತ್ತಿರುವ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಭಾನುವಾರ ಶಾಸಕ ಎ. ಎಸ್.ಪೊನ್ನಣ್ಣ ವೀಕ್ಷಿಸಿದರು.
ಅನ್ಯ ಕಾರ್ಯ ನಿಮಿತ್ತ ಈ ಮಾರ್ಗದಲ್ಲಿ ಸಂಚರಿಸುವ ಸಂದರ್ಭ ಕಾಮಗಾರಿ ವೀಕ್ಷಿಸಿದ ಶಾಸಕರು, ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.