ರಾಯಚೂರು ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಽಕಾರಿ ನಿತೀಶ್ ಕೆ ಅವರು ಹೇಳಿದರು.
ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸೂತಿ ಆರೈಕೆ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಯಂದಿರರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವಂತ ಸೌಲಭ್ಯಗಳನ್ನು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವಂತೆ ಮಾಡುವ ಮೂಲಕ ರಾಜ್ಯಕ್ಕೆ ರಾಯಚೂರು ಜಿಲ್ಲೆಯು ಮಾದರಿಯಾಗಬೇಕು. ಈ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಜಿಲ್ಲೆಯ ಆರೋಗ್ಯ ಇಲಾಖೆಯ ಅಽಕಾರಿಗಳಿಗೆ ಸಕಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಜಿಲ್ಲಾ ಶಸöಚಿಕಿತ್ಸಕರಾದ ಡಾ.ವಿಜಯ ಶಂಕರ ಅವರು ಮಾತನಾಡಿ, ನರ್ಸಿಂಗ್ ಅಽಕಾರಿಗಳು ನಿರ್ಲಕ್ಷ÷್ಯತೆ ವಹಿಸದೆ ತಮ್ಮ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಹಿಂದುಳಿದ ಈ ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಇಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಎಲ್ಲರೂ ಶ್ರಮಿಸಬೇಕು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿ ರಿಮ್ಸ್ ಸಂಸ್ಥೆಯಲ್ಲಿ ಕೂಡ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ನರ್ಸಿಂಗ್ ಅಽಕಾರಿಗಳು ರೋಗಿಗಳೊಂದಿಗೆ ಬೆರತು ಸೇವೆ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಽಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, ಜಿಲ್ಲೆಯ ಜಿಲ್ಲಾಽಕಾರಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿವೆ. ಆರೋಗ್ಯ ವಿಚಾರವಾಗಿ ಜಿಲ್ಲಾಽಕಾರಿಗಳು ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದ್ದಾರೆ. ಇಲಾಖೆಯ ಅಽಕಾರಿಗಳು, ಸಿಬ್ಬಂದಿಯು ತರಬೇತಿಯನ್ನು ಸರಿಯಾಗಿ ಪಡೆದುಕೊಂಡು ಇನ್ನೂ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಿಮ್ಸ್ ಸಂಸ್ಥೆಯ ನಿರ್ದೇಶಕರಾದ ಡಾ.ರಮೇಶ, ಜಿಲ್ಲಾ ಆರ್.ಸಿ.ಹೆಚ್ ಅಽಕಾರಿ ಡಾ.ನಂದಿತಾ, ಡಾ.ಅಶೋಕ, ಡಾ.ರಂಗನಾಥ, ನವೋದಯ ಡೀನ್ ದೇವನಂದ, ರಾಯಚೂರು ತಾಲೂಕು ಆರೋಗ್ಯಾಽಕಾರಿ ಡಾ.ಪ್ರಜ್ವಲ್ ಸೇರಿದಂತೆ ಇತರರು ಇದ್ದರು.