ಕುಶಾಲನಗರ:
ಮೈಸೂರು-ಕುಶಾಲನಗರ ರೈಲ್ವೆ ಯೋಜನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿರುವುದರಿಂದ ಯೋಜನೆ ನೆನೆಗುದಿಗೆ ಬೀಳುವಂತಾಗಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕುಶಾಲನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಯೋಜನೆ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆಬರಬೇಕಿದ್ದು, ಸರ್ಕಾರ ಯಾಕೆ ಯೋಜನೆ ತಿರಸ್ಕಾರ ಮಾಡಿದೆ ಎನ್ನುವುದು ಗೊತ್ತಾಗಿಲ್ಲ.
ಈ ಯೋಜನೆ ಕೊಡಗಿಗೆ ಅಗತ್ಯ ಆಗಿರುವುದರಿಂದ ಸಂಬಂಧಿಸಿದವರ ಜತೆ ಚರ್ಚಿಸಲಾಗುವುದು.ವಉತ್ತರ ಕೊಡಗಿನ ಗ್ರಾಮಗಳು ಮೈಸೂರು ಜಿಲ್ಲೆಗೆ ಹೊಂದಿಕೊಂಡಂತಿದ್ದು ಬೇಸಾಯದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಸುತ್ತಾರೆ.
ರೈತರಿಗೆ ನಗರ ಪ್ರದೇಶಕ್ಕೆ ತಮ್ಮ ಉತ್ಪನ್ನ ಸಾಗಾಟಗೊಳಿಸಲು ರೈಲ್ವೇ ಯೋಜನೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ ಅನುದಾನಗಳನ್ನು ಗ್ರಾಮಾಂತರ ಪ್ರದೇಶಗಳಿಗೂ ಕಾಯ್ದಿರಿಸಿ ಕ್ರಿಯಾ ಯೋಜನೆ ಅನುಗುಣವಾಗಿ ಗ್ರಾಮಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.
ಸಂಸದರ ನಿಧಿಯಿಂದ ಗ್ರಾಮವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು. ಕೊಡಗಿನಲ್ಲಿ ಬಿಎಸ್ಎನ್ಎಲ್ ಟವರ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸಂಬಂಧಿಸಿದವರಿಗೆ ಪತ್ರ ವ್ಯವಹಾರ ನಡೆಸಲಾಗಿದೆ.ವಮೈಸೂರು-ಕುಶಾಲನಗರ ಚತುಷ್ಪತ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಕೊಡಗು ಬಿಜೆಪಿ ಭದ್ರಕೋಟೆಯಾಗಿದ್ದುವಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಕರಿಮೆಣಸು ಮೇಲಿನ ಜಿಎಸ್ಟಿ ವಿನಾಯ್ತಿಯಿಂದ ಬೆಳೆಗಾರರಿಗೆ ಅನುಕೂಲ ಒದಗಲಿದೆ. ರಾಜ್ಯ ಸರ್ಕಾದಲ್ಲಿ ಅನುದಾನ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ ಎಂದು ಆರೋಪಿಸಿದರು.
ಇದಕ್ಕೂ ಮೊದಲುಬಕುಶಾಲನಗರ ತಾಲೂಕಿನ ವಿವಿಧೆಡೆ ಪ್ರವಾಸ ಕೈಗೊಂಡರು. ಹೆಬ್ಬಾಲೆ, ಶಿರಂಗಾಲ, ತೊರೆನೂರು, ಚಿಕ್ಕ ಅಳುವಾರ, ಕುಶಾಲನಗರ, ಗುಡ್ಡೆಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ನಂತರ ಆಯಾ ಗ್ರಾಮಗಳಲ್ಲಿ ನಡೆದ ಸಭೆಯಲ್ಲಿ ಗ್ರಾಮಸ್ಥರು ಹಾಗೂ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭ ಮಾಜಿ ಶಾಸಕ ಅಪ್ಪಚ್ಚುರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಕ್ಷಿತ್ ಮಾವಾಜಿ, ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಪ್ರಧಾನ ಕಾರ್ಯದರ್ಶಿ ಮೋಕ್ಷಿಕ್ ರಾಜ್, ಕಾರ್ಯದರ್ಶಿ ಸೋಮೇಶ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಚರಣ್, ಯುವಮೋರ್ಚಾ ಕಾರ್ಯದರ್ಶಿ ಎಂ.ಸಿ.ಸಚಿನ್
ಪ್ರಮುಖರಾದ ಸುಜು ಪೊನ್ನಣ್ಣ, ಮಂಡಲ ಯುವ ಮೋರ್ಚಾ ಮಾಜಿ ಅಧ್ಯಕ್ಷ ಹೇರೂರು ಚಂದ್ರಶೇಖರ್ ಸೇರಿದಂತೆ ಹೆಬ್ಬಾಲೆ, ತೊರೆನೂರು, ಶಿರಂಗಾಲ, ಅಳುವಾರ, ಗುಡ್ಡೆಹೊಸೂರು ಗ್ರಾಮಗಳ ಜನಪ್ರತಿನಿಧಿಗಳು, ಶಕ್ತಿ ಕೇಂದ್ರದ ಪ್ರಮುಖರು, ಮಂಡಲ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಇದ್ದರು.