ಜಿಲ್ಲೆ

ಓಡೀಲು ದೇವಳದಲ್ಲಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ

ಸೌಮ್ಯ ಆರ್

ಬೆಳ್ತಂಗಡಿ: ಶ್ರೀಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ಜರುಗಿತು.

ದೇವತಾ ಪ್ರಾರ್ಥನೆ, ಪುಣಹಾ ವಾಚನ, ನವಕ ಪ್ರಧಾನ, ಏಕಾದಶ ರುದ್ರಾಭಿಷೇಕ ಮಹಾಕಲಶಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು. ವಿಶೇಷವಾಗಿ ಆಪರೇಶನ್ ಸಿಂಧೂರ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ಭಾರತೀಯ ಸೇನೆಯ ಹೆಸರಿನಲ್ಲಿ ಮಾತೃಭೂಮಿಗೆ ಹೋರಾಡುವ ಎಲ್ಲ ಸೈನಿಕರಿಗೆ ಒಳಿತಾಗಲಿ ಎಂಬ ವಿಶೇಷ ಸಂಕಲ್ಪದೊಂದಿಗೆ ಮಾಜಿ ಸೈನಿಕರ ಉಪಸ್ಥಿತಿ ಹಾಗೂ ಭಕ್ತವೃಂದದಿಂದ ವಿಶೇಷ ಪ್ರಾರ್ಥನೆ ಮಾಡಲಾಯಿತು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು. ರಾತ್ರಿ ದಿ.ಕೆ.ವಸಂತ ಬಂಗೇರ ಸ್ಮರಣಾರ್ಥ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.