ಜಿಲ್ಲೆ

ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು!

ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​.ಎಜಾಜ್​ ಪಾಷಾ ಆದೇಶ

ಚಿಕ್ಕಬಳ್ಳಾಪುರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎಲ್​.ಬಿಂದುಮಣಿ ಅವರನ್ನು ಅಮಾನತುಗೊಳಿಸಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​.ಎಜಾಜ್​ ಪಾಷಾ ಆದೇಶ ಹೊರಡಿಸಿದ್ದಾರೆ. ಕರೆ ಮಾಡಿದರೂ ಸಂಪರ್ಕಕ್ಕೆ ಸಿಗದೆ ಶಾಸಕರನ್ನು ಅಧಿಕಾರಿ ಕಡೆಗಣಿಸಿರುವುದೇ ಅಮಾನತಿಗೆ ಕಾರಣ. ರ್ನಿಲಕ್ಷ$್ಯ ಧೋರಣೆಯ ಬಗ್ಗೆ ಬಾಗೇಪಲ್ಲಿ ಶಾಸಕ ಎಸ್​.ಎನ್​.ಸುಬ್ಬಾರೆಡ್ಡಿ ದೂರು ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ: ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಅಧಿಕಾರಿಯ ಮೊಬೈಲ್​ ಸಂಖ್ಯೆಗೆ 3 ದಿನ ಶಾಸಕ ಎಸ್​.ಎನ್​.ಸುಬ್ಬಾರೆಡ್ಡಿ ಕರೆ ಮಾಡಿದ್ದಾರೆ. ಆದರೆ ಸ್ಪಂದನೆ ಸಿಕ್ಕಿಲ್ಲ. ಬಿಡುವಿನ ಬಳಿಕವಾದರೂ ಸಂಪರ್ಕಿಸಿ, ಸಮಸ್ಯೆ ಆಲಿಸಿಲ್ಲ. ಇದರ ಬಗ್ಗೆ ಮೇಲಧಿಕಾರಿಗಳಿಗೆ ಶಾಸಕರು ದೂರು ಸಲ್ಲಿಸಿ, ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರದ ಶಿಫಾರಸಿಗೆ ಅಧೀನ ಕಾರ್ಯದರ್ಶಿ ಅಮಾನತು ಆದೇಶ ಹೊರಡಿಸಿದ್ದಾರೆ.