ಸುಂಟಿಕೊಪ್ಪ: ಮಾದಾಪುರ ಸುತ್ತಲಿನ ಮಳೆ ಪ್ರವಾಹ ಪೀಡಿತ ನಿರ್ವಸತಿ ಕುಟುಂಬಗಳಿಗೆ ಸಮೀಪದ ಗರಂಗದೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬುಧವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ, ಅಲ್ಲಿರುವ 35 ಜನರ ಆರೋಗ್ಯ ವಿಚಾರಿಸಿತು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶಾ, ಡಾ.ದರ್ಶನ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಭೇಟಿ ನೀಡಿ, ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಿದರು.
ಆರೋಗ್ಯ ಇಲಾಖೆಯಿಂದ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶ್ರೀನಿವಾಸ್‌ಮಾತನಾಡಿ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ ಕಾಯಿಲೆ, ಕ್ಯಾನ್ಸರ್, ಪಾರ್ಶ್ವವಾಯುವಿನ ಬಗ್ಗೆ ಸಂಪೂರ್ಣವಾದ ಜಾಗೃತಿ ಮೂಡಿಸಿದರು. ಅವುಗಳನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.
ಮಳೆಗಾಲದಲ್ಲಿ ಹರಡಬಹುದಾದ ಕಾಯಿಲೆಗಳ ಬಗ್ಗೆ, ವೈಯಕ್ತಿಕ ಶುಚಿತ್ವ, ರಕ್ತ ಹೀನತೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂೆಜ್ವರ ಹಾಗೂ ಡೆಂೆಜ್ವರದ ಲಕ್ಷಣ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಸಾರ ಭೇದಿ ನಿಯಂತ್ರಣದ ಬಗ್ಗೆ ಸಹ ತಿಳಿಸಿದರು.
ಡೆಂೆ, ಮಲೇರಿಯಾ ಜ್ವರವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದರು. ಮಲೇರಿಯಾ ಜ್ವರದ ಲಕ್ಷಣಗಳು, ಚಿಕಿತ್ಸಾ ಕ್ರಮಗಳ, ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಮಾಹಿತಿ ನೀಡಿದರು.
ಮಾದಾಪುರ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಪ್ಪ ಮಾತನಾಡಿದರು. ಪ್ರಯೋಗ ಶಾಲಾ ತಂತ್ರಜ್ಞ ಪ್ರಜ್ವಲ್, ಸಮುದಾಯ ಆರೋಗ್ಯಾಧಿಕಾರಿ ಶಫಿನಾ, ಆಶಾ ಕಾರ್ಯಕರ್ತೆ ಪ್ರೇಮಾ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಸಹ ಶಿಕ್ಷಕರು ಇದ್ದರು.