ಗುಂಡ್ಲುಪೇಟೆ: ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗಣಿಗಳಿಗೆ ಭೇಟಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಸುರಕ್ಷತೆ ಹಾಗೂ ನಿಯಮ ಪಾಲನೆ ಕುರಿತು ಪರಿಶೀಲಿಸಿದರು.
ಇಲಾಖೆಯ ಉಪ ನಿರ್ದೇಶಕಿ ಪದ್ಮಜಾ ನೇತೃತ್ವದ ಅಧಿಕಾರಿಗಳ ತಂಡ ಮಡಹಳ್ಳಿ, ಕೂತನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಡೆಯುತ್ತಿರುವ ಬಿಳಿಕಲ್ಲು ಗಣಿಗಳಿಗೆ ದಿಢೀರ್ ಭೇಟಿ ನೀಡಿ ಇಲಾಖೆ ಸೂಚಿಸಿರುವ ಸುರಕ್ಷತಾ ಕ್ರಮಗಳ ಪಾಲನೆಯನ್ನು ಪರಿಶೀಲಿಸಿದರು. ಗಡಿಗಳಲ್ಲಿ ಎತ್ತರದ ಬೇಲಿಗಳನ್ನು ಅಳವಡಿಸುವಂತೆ ಅಧಿಕಾರಿಗಳು ಸೂಚಿಸಿದರು. ವಾರಸುದಾರರಿಲ್ಲದ ಎರಡು ಕಂಪ್ರೆಸರ್‌ಗಳನ್ನು ಇದೇ ವೇಳೆ ಪೊಲೀಸರ ವಶಕ್ಕೆ ನೀಡಿದರು.