ಕೊಳ್ಳೇಗಾಲ: ತಾಲೂಕಿನ ಶ್ರೀಕ್ಷೇತ್ರ ಕುರುಬನ ಕಟ್ಟೆ ದೇವಾಲಯ ಮುಂಭಾಗವಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸೋಮವಾರ ದುರಸ್ತಿ ಮಾಡಿಸಲಾಯಿತು.
ನಿರ್ವಹಣೆ ಇಲ್ಲದೆ ಕುಡಿಯುವ ನೀರಿನ ಘಟಕ ಸ್ಥಗಿತ ಎಂಬ ಶೀರ್ಷಿಕೆಯಡಿ ಸೋಮವಾರ ವಿಜಯವಾಣಿ ದಿನಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಕೆಟ್ಟು ನಿಂತ ಪರಿಣಾಮ ಕುರುಬನ ಕಟ್ಟೆಗೆ ಬರುವ ಭಕ್ತರಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ. ನಿರ್ವಹಣೆ ಜವಾಬ್ದಾರಿ ಹೊತ್ತ ಏಜೆನ್ಸಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕ್ರಮವಹಿಸಿಲ್ಲ. ದೇವಾಲಯಕ್ಕೆ ಬರುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಸಿಗದೇ ತೊಂದರೆಯಾಗಿದೆ ಎಂದು ವರದಿ ಬಿತ್ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕವನ್ನು ಪರಿಶೀಲಿಸಿ ದುರಸ್ತಿಗೊಳಿಸಿದ್ದಾರೆ. ಈ ಬಗ್ಗೆ ವಿಜಯವಾಣಿಯೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜೂನಿಯರ್ ಇಂಜಿನಿಯರ್ ಪೂರ್ಣಿಮಾ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಲಾಗಿದೆ. ಇನ್ನೂ 10 ದಿನಗಳು ನೀರಿನ ಘಟಕದ ಮೇಲೆ ನಿಗಾ ಇಟ್ಟು ನಿರ್ವಹಣೆ ಮಾಡಲಾಗುತ್ತದೆ. ನಂತರ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದರು.
=============
1ಕೆಜಿಎಲ್ -3
ಕೊಳ್ಳೇಗಾಲ ತಾಲೂಕಿನ ಕುರುಬನ ಕಟ್ಟೆ ದೇವಾಲಯ ಮುಂಭಾಗ ಕೆಟ್ಟು ನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ದುರಸ್ತಿ ಗೊಳಿಸಿರುವುದು.