ಜಿಲ್ಲೆ

ಓಲಾ, ಉಬರ್ ಯಾವುದೇ ಸಂಸ್ಥೆಯಿರಲಿ.. ಪರವಾನಗಿ ಪಡೆಯದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಆದೇಶ

ಬೆಂಗಳೂರು: ಓಲಾ, ಉಬರ್,‌ ರ್ಯಾಪಿಡೋ.. ಯಾವುದೇ ಸಂಸ್ಥೆ ಅಥವಾ ವ್ಯಕ್ತಿಯಿರಲಿ‌‌, ಕಾಯ್ದೆ ಪ್ರಕಾರ ಪರವಾನಗಿ ಪಡೆಯದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಆದೇಶಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ‌, ಸಾರಿಗೆ ಇಲಾಖೆ ಆಯುಕ್ತರನ್ನು ಸೋಮವಾರ ಸಂಜೆ ಕರೆಸಿಕೊಂಡು ಮಾಹಿತಿ ಪಡೆದಿರುವೆ. ಲೈಸೆನ್ಸ್ ಪಡೆಯುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸುವ ಸಂಸ್ಥೆ ಇಲ್ಲವೇ ವ್ಯಕ್ತಿ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದು, ತಕ್ಷಣವೇ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.