ಜಿಲ್ಲೆ

ತನ್ನ ಶಾಲೆ ಆವರಣದಲ್ಲೇ ಹಳೇ ವಿದ್ಯಾರ್ಥಿ ಆತ್ಮಹತ್ಯೆ!

arunakunigal

ಕೊಣಾಜೆ(ದಕ್ಷಿಣ ಕನ್ನಡ): ತಾನು ಆಟವಾಡುತ್ತ ಅಕ್ಷರ ಕಲಿತ ಶಾಲೆ ಆವರಣದಲ್ಲೇ ಯುವಕನೊಬ್ಬ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತನನ್ನು ನೆತ್ತಿಲಪದವು ಸೈಟ್​​ನ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ. ಕೊಣಾಜೆ ಬಳಿಯ ಕೊಲ್ಲರಕೋಡಿ ಪ್ರೌಢಶಾಲೆ ಕಚೇರಿ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇದೇ ಶಾಲೆಯ ಹಳೇ ವಿದ್ಯಾರ್ಥಿ. ಇದನ್ನೂ ಓದಿರಿ ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು? 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ರಕ್ಷಿತ್ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಕೊಣಾಜೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.