ವಿಜಯವಾಣಿ ಸುದ್ದಿಜಾಲ ಕೊಕ್ಕಡ
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು. ಅನೇಕ ಹಳೇ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೇ ವಿದ್ಯಾರ್ಥಿಗಳು ಪರಸ್ಪರ ತಮ್ಮ ಪರಿಚಯದೊಂದಿಗೆ ಶಾಲೆಯಲ್ಲಿ ಕಲಿತ ದಿನಗಳನ್ನು ಮೆಲಕು ಹಾಕಿದರು.ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ರಾಜ ಗುರು ಹೆಬ್ಬಾರ್, ಉಪಾಧ್ಯಕ್ಷರಾಗಿ ಕೃಷ್ಣಪ್ರಸಾದ್, ಕಾರ್ಯದರ್ಶಿಯಾಗಿ ಜಗದೀಶ ಶೆಟ್ಟಿ, ಉಪ ಕಾರ್ಯದರ್ಶಿಯಾಗಿ ಯುವರಾಜ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಶೆಟ್ಟಿ ಆಯ್ಕೆಯಾದರು. ಪದನಿಮಿತ್ತ ಕಾರ್ಯದರ್ಶಿಯಾಗಿ ಮುಖ್ಯಶಿಕ್ಷಕಿ ಶಾಂತ ಶೆಟ್ಟಿ ಕಾರ್ಯ ನಿರ್ವಹಿಸಲಿದ್ದಾರೆ.
ಆಂಗ್ಲಭಾಷಾ ಶಿಕ್ಷಕಿ ಶೋಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಸುವರ್ಣ ಸಂಭ್ರಮದಿಂದ 10 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿದ್ದ ಲಕ್ಷ್ಮೀ ನಾರಾಯಣ ಭಟ್ ಶುಭ ಹಾರೈಸಿದರು. ನೂತನ ಅಧ್ಯಕ್ಷ ರಾಜಗುರು ಹೆಬ್ಬಾರ್ ಎಲ್ಲರ ಸಹಕಾರ ಕೋರಿದರು. ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ಶಾಂತಾ ಸ್ವಾಗತಿಸಿ, ಸುಚಿತ್ರ ವಂದಿಸಿದರು. ಶರತ್ ಕುಮಾರ್ ತುಳುಪುಳೆ ಕಾರ್ಯ್ಕ್ರಮ ನಿರ್ವಹಿಸಿದರು. ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.