ಸುಂಟಿಕೊಪ್ಪ: ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ 24ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಫೆ.25 ರಂದು ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ಡಾನ್ಸ್ ಮೇಳ ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್‌ನ ಅಧ್ಯಕ್ಷ ವಸಂತ ತಿಳಿಸಿದ್ದಾರೆ.
24ನೇ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರಥಮ ಸ್ಥಾನ ಪಡೆದ ತಂಡಕ್ಕೆ ನಗದು 20,000 ರೂ. ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ 15,000 ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ 10,000 ರೂ. ನಗದು ನೀಡಲಾಗುತ್ತದೆ.
ಸ್ಥಳೀಯ ಪುರುಷರಿಗೆ ಕಬಡ್ಡಿ ಪಂದ್ಯಾವಳಿ, ಮುಕ್ತ ರಸ್ತೆ ಓಟ, ಮಹಿಳೆಯರಿಗೆ ಥ್ರೋಬಾಲ್, ಹಗ್ಗ ಜಗ್ಗಾಟ, ಹಾಗೂ 5 ವರ್ಷದೊಳಗಿನ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡಾನ್ಸ್ ಮೇಳ ಆಯೋಜಿಸಲಾಗಿದೆ. ಡಾನ್ಸ್ ಮೇಳದಲ್ಲಿ ಭಾಗವಹಿಸುವವರು ಫೆ.20ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರು ಕ್ರೀಡಾ ದಿನದಂದು ಬೆಳಗ್ಗೆ 10 ಗಂಟೆಯೊಳಗೆ ಹಾಜರಿರುವಂತೆ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.