ಚನ್ನರಾಯಪಟ್ಟಣ: ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಎಚ್.ಎಸ್.ಶ್ರೀಕಂಠಯ್ಯ ಅವರ ಜೀವನ ಮತ್ತು ಸಾಧನೆ ಕುರಿತು ರಚಿಸಲಾದ ‘ನನ್ನೊಳಗಿನ ನಾನು’ ಪುಸ್ತಕ ಬಿಡುಗಡೆ ಸಮಾರಂಭವನ್ನು ಜ.28ರಂದು ಬೆಳಗ್ಗೆ 11.30ಕ್ಕೆ ಪಟ್ಟಣದ ನವೋದಯ ವಿದ್ಯಾ ಸಂಸ್ಥೆಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಬಿಜೆಪಿ ಮುಖಂಡ ಅಣತಿ ಆನಂದ್ ತಿಳಿಸಿದರು.
ಹಿರಿಯ ಪತ್ರಕರ್ತ ಮುದ್ದೇಗೌಡ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಕುರಿತು ಪ್ರೊ.ಸಿದ್ದೇಗೌಡ ಮಾತನಾಡಲಿದ್ದಾರೆ. ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ನಲ್ಲೂರು ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದಿನ ಯುವ ಪೀಳಿಗೆಗೆ ಹಿರಿಯರ ಚರಿತ್ರೆ ಬಗ್ಗೆ ತಿಳಿಸುವ ಪ್ರಯತ್ನ ಆಗಬೇಕಿದೆ. ಅಲ್ಲದೆ ಪ್ರತಿಯೊಬ್ಬರಿಗೆ ತಾಲೂಕಿನ ಸ್ಥಿತಿಗತಿಗಳ ಬಗ್ಗೆ ಅರಿವು ಇರಬೇಕು. ಈ ಪುಸ್ತಕದ ಮೂಲಕ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರೊ.ಸಿದ್ದೇಗೌಡ, ಲೇಖಕ ಎಚ್.ಎಸ್.ಶ್ರೀಕಂಠಯ್ಯ ಇದ್ದರು.