ಸಿಂಧನೂರು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ವಿಕಾಸ ಅಕಾಡೆಮಿ ಮುಖ್ಯ ಸಂಯೋಜಕ ಬಸವರಾಜ ಪಾಟೀಲ್ ಸೇಡಂ ಬಿಡುಗಡೆಗೊಳಿಸಿದರು. ಜಿಲ್ಲಾ ಸಂಚಾಲಕ ಈರೇಶ ಇಲ್ಲೂರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡಬಸವರಾಜ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ವೈ. ನರೇಂದ್ರನಾಥ, ಸೋಮನಗೌಡ ಮಾವಿನಮಡ್ಗು, ಸರಸ್ವತಿ ಪಾಟೀಲ, ಯೋಗ ಗುರು ಭಾಸ್ಕರ್, ಪ್ರಾಚಾರ್ಯ ಡಾ.ಎಸ್.ಶಿವರಾಜ ಇದ್ದರು. 
ಜಿಲ್ಲೆ

ಜ.29 ರಂದು ಭಾರತೀಯ ಸಾಂಸ್ಕೃತಿಕ ಉತ್ಸವ

ಸಿಂಧನೂರು: ಕಲಬುರಗಿಯಲ್ಲಿ ಜ.29 ರಂದು ನಡೆಯುವ ಶ್ರೀ ಕೊತ್ತಲ ಭಾರತೀಯ ಶಿಕ್ಷಣ ಸಮಿತಿ ಹಾಗೂ ಭಾರತ ವಿಕಾಸ ಸಂಗಮ ಮತ್ತು ವಿಕಾಸ ಅಕಾಡೆಮಿ ಆಶ್ರಯಲ್ಲಿ ಭಾರತೀಯ ಸಾಂಸ್ಕೃತಿಕ ಉತ್ಸವದಲ್ಲಿ 40 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜಕ ಬಸವರಾಜ ಪಾಟೀಲ್ ಸೇಡಂ ತಿಳಿಸಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಸಿಂಧನೂರಿನ ರೈತರು, ಶಾಲಾ ಸಂಸ್ಥೆಯವರು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕು. ಸುಮಾರು 30-40 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು.