ಬೆಳ್ತಂಗಡಿ: ವೇಣೂರು-ಪೆರ್ಮುಡ 32ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ ಮಾ.30ರಂದು ನಡೆಯಲಿದೆ ಎಂದು ಬೆಸ್ಟ್ ಫೌಂಡೇಷನ್ ಅಧ್ಯಕ್ಷ, ಕಂಬಳ ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಬೆಳಗ್ಗೆ 8.30ಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಕಂಬಳ ಉದ್ಘಾಟಿಸುವರು. ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ತಹಸೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕುಮಾರ್ ಕದ್ರಿ, ಪೊಲೀಸ್ ನಿರೀಕ್ಷಕ ಸುಬ್ಬಾಪುರ ಮಠ, ಇಒ ಭವಾನಿಶಂಕರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಂಬಳ ಸಮಿತಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸುವರು. ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ಮಾಜಿ ಎಂಎಲ್‌ಸಿ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತದಾರ ಶಿವಪ್ರಸಾದ್ ಅಜಿಲ, ಶ್ರೀಕ್ಷೇತ್ರ ಕುದ್ರೋಳಿಯ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರಂಜಿ, ಬೋಟಿಂಗ್, ಗ್ರಾಮೀಣ ಖಾದ್ಯ ಮತ್ತು ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್, ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ, ಉಪಾಧ್ಯಕ್ಷರಾದ ಗೋಪಾಲ ಪೂಜಾರಿ, ಸ್ಟೀವನ್ ಮೋನಿಸ್, ಕೋಶಾಧ್ಯಕ್ಷ ಅಶೋಕ್ ಪಾಣೂರು, ಮಹಾಪೋಷಕ ಪ್ರವೀಣ್ ಫರ್ನಾಂಡಿಸ್ ಉಪಸ್ಥಿತರಿದ್ದರು.