ಜಿಲ್ಲೆ

ಅ.3ರಂದು ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಉದ್ಘಾಟನೆ

reportermng

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಬಳಿ ನೂತನವಾಗಿ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಉದ್ಘಾಟನಾ ಸಮಾರಂಭ ಅ.3ರಂದು ಸಾಯಂಕಾಲ 6ಕ್ಕೆ ನಡೆಯಲಿದೆ. ದ.ಕ. ಸಂಸದ , ದಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ. ಮಂಗಳಾದೇವಿ ಬಳಿ ನಿರ್ಮಿಸಲಾದ ವೃತ್ತವನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
…………….