ಜಿಲ್ಲೆ

15ರಂದು ಕೆ.ಸಂಜೀವ ಪೂಜಾರಿಗೆ ಅಭಿನಂದನೆ

ಬಂಟ್ವಾಳ: ಕೆ.ಸಂಜೀವ ಪೂಜಾರಿ ಅಭಿನಂದನಾ ಸಮಿತಿ, ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲ ಬಿ.ಸಿ.ರೋಡು, ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮೆಲ್ಕಾರ್, ಶಿವಗಿರಿ ಮಹಿಳಾ ಸಹಕಾರಿ ಸಂಘ ಮೆಲ್ಕಾರ್, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಬೊಳ್ಳಾಯಿ ಆಶ್ರಯದಲ್ಲಿ, ಸಹಕಾರಿ ಕ್ಷೇತ್ರ ಹಾಗೂ ಸಮಾಜ ಸೇವೆಯಲ್ಲಿ ವಿಶಿಷ್ಟ ಸಾಧನೆಗಾಗಿ 2024ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕೆ.ಸಂಜೀವ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭ ಡಿ.15ರಂದು ಭಾನುವಾರ ಬೆಳಗ್ಗೆ ಸಜೀಪಮೂಡದ ಸುಭಾಷ್‌ನಗರದ ಶ್ರೀಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಅಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ದೀಪ ಪ್ರಜ್ವಲಿಸುವರು. ಶಾಸಕ ರಾಜೇಶ್ ನಾಕ್, ಮಾಜಿ ಸಚಿವ ಬಿ.ರಮಾನಾಥ ರೈ, ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ ಉಪಸ್ಥಿತರಿರುವರು.

ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಅಭಿನಂದನಾ ಭಾಷಣ ಮಾಡುವರು. ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ, ಶಿವಗಿರಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಜಯಂತಿ ಪೂಜಾರಿ, ಸಜೀಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ರಮೇಶ್ ಅನ್ನಪ್ಪಾಡಿ, ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷ ರಾಜೇಶ್ ಸುವರ್ಣ, ಕಾಮಧೇನು ಮಹಿಳಾ ಸಹಕಾರಿ ಸಂಘ ಅಧ್ಯಕ್ಷೆ ಉಷಾ ಅಂಚನ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.