ಜಿಲ್ಲೆ

ಜೂ.೨೪ ರಂದು ನಿವೇಶನಕ್ಕೆ ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಆದರ್ಶ್. ಎಂ.ಕೆ.

ಮಡಿಕೇರಿ: ಜಿಲ್ಲೆಯ ನಿವೇಶನ ರಹಿತರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು(ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್) ವತಿಯಿಂದ ಜೂ.೨೪ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದರು.


ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಬಾಡಿಗೆ ಮನೆ, ಲೈನ್‌ಮನೆ, ನದಿ ತಡದಲ್ಲಿ ವಾಸಿಸುತ್ತಿದ್ದಾರೆ. ನಿವೇಶನಕ್ಕಾಗಿ ಹೋರಾಟ ಮಾಡುತ್ತಿದ್ದರೂ, ಯಾವುದೇ ಸ್ಪಂಧನೆ ದೊರೆಯುತ್ತಿಲ್ಲ. ಈ ಹಿನ್ನೆಲೆ ನಿವೇಶನದ ಜತೆಗೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಕಾರ್ಯದರ್ಶಿ ಎ.ಸಿ.ಸಾಬು, ಉಪಕಾರ್ಯದರ್ಶಿಗಳಾದ ಕೆ.ಎಸ್.ಶಾಜಿ ರಮೇಶ್, ಕೆ.ಕೆ.ಹರಿದಾಸ್, ಖಜಾಂಚಿ ಎನ್.ಡಿ.ಕುಟ್ಟಪ್ಪ ಉಪಸ್ಥಿತರಿದ್ದರು.