ಜಿಲ್ಲೆ

14ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ)ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನ.14ರಂದು ಚುನಾವಣೆ ನಿಗದಿಯಾಗಿದೆ. ಹಾಲಿ ಅಧ್ಯಕ್ಷ ರಮೇಶ ಕತ್ತಿ ಅವರೇ ಈ ಬಾರಿಯೂ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬಿಡಿಸಿಸಿ 16 ನಿರ್ದೇಶಕ ಸ್ಥಾನಗಳ ಪೈಕಿ 13 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಹಾಲಿ ಅಧ್ಯಕ್ಷ ರಮೇಶ ಕತ್ತಿ ಅವರೇ ಈ ಬಾರಿಯೂ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಉಪಾಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಶಾಸಕ ಅರವಿಂದ ಪಾಟೀಲ, ಶಿವಾನಂದ ಡೋಣಿ, ರಾಜೇಂದ್ರ ಅಂಕಲಗಿ ಹೆಸರು ಕೇಳಿ ಬಂದಿದೆ. ಆದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ರಮೇಶ ಜಾರಕಿಹೊಳಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಕೈಗೊಳ್ಳುವ ನಿರ್ಧಾರದ ಮೇಲೆ ಆಯ್ಕೆ ಅಂತಿಮಗೊಳ್ಳಲಿದೆ.

ನ.14ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಬಳಿಕ ನಾಮಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ಇರಲಿದ್ದು, ಒಂದು ವೇಳೆ ನಾಮಪತ್ರ ವಾಪಸ್ ತೆಗೆದುಕೊಳ್ಳದಿದ್ದರೆ ಚುನಾವಣೆ ನಡೆಯಲಿದೆ.

ಈಗಾಗಲೇ ಬಿಡಿಸಿಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂಬಂಧ ಎಲ್ಲ 16 ಜನ ನಿರ್ದೇಶಕರಿಗೆ ನ.6ರಂದು ನೋಟಿಸ್ ನೀಡಲಾಗಿದೆ. ನ.14ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆಯಲಿದೆ. | ಸಯೀದಾ ಆಫ್ರೀನ್ ಬಾನು ಬಳ್ಳಾರಿ ಚುನಾವಣಾಧಿಕಾರಿ