ಜಿಲ್ಲೆ

17ರಂದು ಕೇಂದ್ರ ಸಚಿವ ಅಮಿತ್​ ಷಾ ಬೆಳಗಾವಿಗೆ

ಬೆಳಗಾವಿ: ಪಕ್ಷದ ವಿವಿಧ ಕಾರ್ಯಕ್ರಮಗಳ ನಿಮಿತ್ತ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಜ.17ರಂದು ಬೆಳಗಾವಿ ಕೆಎಲ್‌ಇ ಆಸ್ಪತ್ರೆ, ಪಕ್ಷದ ಜನಸೇವಕ ಕಾರ್ಯಕ್ರಮ ಹಾಗೂ ದಿ. ಸುರೇಶ ಅಂಗಡಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

17ರಂದು ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಹೆಲಿಕ್ಯಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಲಿದ್ದಾರೆ. ಮಧ್ಯಾಹ್ನ 1.15 ರಿಂದ 2.50 ರ ವರೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. 3 ರಿಂದ 4 ಗಂಟೆವರೆಗೆ ನಗರದ ಕೆಎಲ್‌ಇ ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಲಿದ್ದಾರೆ.

4.10ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗುವ ಪಕ್ಷದ ಜನಸೇವಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 5.40ಕ್ಕೆ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 6-7.20ರ ವರೆಗೆ ನಗರದ ಸಂಕಮ್ಮ ಹೋಟೆಲ್‌ನಲ್ಲಿ ಹಮ್ಮಿಕೊಂಡಿರುವ ಸಭೆಯಲ್ಲಿ ಭಾಗಹಿಸಲಿದ್ದಾರೆ. 7.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.