ಜಿಲ್ಲೆ

ಮಹಿಳೆಯ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳ್ಳತನ

ಹಿರೇಕೆರೂರ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು ಆಕೆಯ ಬಳಿಯಿದ್ದ 3.10 ಲಕ್ಷ ರೂ. ಚಿನ್ನಾಭರಣಗಳನ್ನು ಯಾರೋ ದೋಚಿದ ಘಟನೆ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಬಸರಿಹಳ್ಳಿಯ ರೂಪಾ ಗಣೇಶ ದೊಡ್ಡಗೌಡ್ರ (40) ಎಂಬುವರ ಚಿನ್ನಾಭರಣ ದೋಚಿರುವುದು.
ಇವರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶಿರಾಳಕೊಪ್ಪದಿಂದ ಹಿರೇಕೆರೂರಿಗೆ ಬರುತ್ತಿದ್ದ ಸಮಯದಲ್ಲಿ ಪಕ್ಕದಲ್ಲಿ ಕುಳಿತ ಯಾರೋ ಅಪರಿಚಿತರು ಗಮನ ಬೇರೆಡೆ ಸೆಳೆದು ಬ್ಯಾಗ್‌ನಲ್ಲಿಟ್ಟಿದ್ದ 3.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.