ಜಿಲ್ಲೆ

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ

ಬೆಂಗಳೂರು: ಆ.26ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಇರುವುದರಿಂದ ತನಿಷ್ಕ್ ಸಂಸ್ಥೆಯಲ್ಲಿ ಮಕ್ಕಳಿಗಾಗಿ ಶ್ರೀಕೃಷ್ಣ ವೇಷಭೂಷಣ, ರಾಧಾ-ಕೃಷ್ಣ ಅಭಿನಯ, ಶ್ಲೋಕಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸಂಧ್ಯಾ ಜಯರಾಮ್ ಮಾರ್ಗದರ್ಶನದಲ್ಲಿ ಮಲ್ಲೇಶ್ವರದ ಸಂಪಿಗೆ ರಸ್ತೆ 2ನೇ ಕ್ರಾಸ್ ಸಮೀಪ ಇರುವ ತನಿಷ್ಕ್ ಆವರಣದಲ್ಲಿ ಆ.25ರಂದು ಮಧ್ಯಾಹ್ನ 3 ಗಂಟೆಯಿಂದ ಸ್ಪರ್ಧೆ ನಡೆಯಲಿದೆ. 6 ವರ್ಷದೊಳಗಿನ ಮಕ್ಕಳು ಹಾಗೂ 7 ರಿಂದ 9 ವರ್ಷದೊಳಗಿನ ಮಕ್ಕಳಿಗೆ ಎರಡು ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ನೋಂದಣಿಗಾಗಿ ದೂ.9972736455 ಸಂಪರ್ಕಿಸಬಹುದು.