ಹುನಗುಂದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ರಾಮವಾಡಗಿ ಕ್ರಾಸ್ ಹತ್ತಿರ ಸರಣಿ ಅಪಘಾತ ಸಂಭವಿಸಿದ ಸ್ಥಳವನ್ನು ಸಿಪಿಐ ಸುನೀಲ ಸವದಿ ಪರಿಶೀಲಿಸಿದರು. 
ಜಿಲ್ಲೆ

ಸರಣಿ ಅಪಘಾತದಲ್ಲಿ ಓರ್ವ ಸಾವು

ಹುನಗುಂದ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50ರ ರಾಮವಾಡಗಿ ಕ್ರಾಸ್ ಹತ್ತಿರ ಸರಣಿ ಅಪಘಾತದಲ್ಲಿ ಓರ್ವ ಅಸುನೀಗಿದ್ದಾನೆ.

ಇಳಕಲ್ಲ ತಾಲೂಕಿನ ಗುಡೂರ ಎಸ್.ಸಿ. ಗ್ರಾಮದ ಅಮೀನಸಾಬ ಮಿಟ್ಟಲಕೋಡ (44) ಮೃತ. ಮೂವರಿಗೆ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಗೆ ನಿಂತಿದ್ದ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ರಾಜಸ್ಥಾನ ಮೂಲದ ಲಾರಿ ಚಾಲಕ ಮತ್ತು ಕ್ಲೀನರ್ ಪರಾರಿಯಾಗಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.