ಇಳಕಲ್ಲ (ಗ್ರಾ): ರಾಯಚೂರು-ನಿಪ್ಪಾಣಿ ರಾಜ್ಯ ಹೆದ್ದಾರಿ 20ರ ನಂದವಾಡಗಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಇನ್ನೋವಾ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಇಳಕಲ್ಲ ಗ್ರಾಮೀಣ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.