ಜಿಲ್ಲೆ

ATM​ಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆ; ಓರ್ವ ಸಾವು, ಇನ್ನೋರ್ವ ಗಂಭೀರ

ಬೀದರ್​: ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಎಸ್​ಬಿಐ ಎಟಿಎಮ್​ಗೆ (ATM) ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಪೊಂದು ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿ ಸಿನಿಮೀಯ ಶೈಲಿಯಲ್ಲಿ ಹಣ ದೋಚಿರುವ ಘಟನೆ ನಡೆದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗಿರಿ ವೆಂಕಟ್ (42) ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ಶಿವಕುಮಾರ ಗುನ್ನಳ್ಳಿ (27) ಎಂದು ಗುರುತಿಸಲಾಗಿದೆ.

ಏಜೆನ್ಸಿ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಸಿಬ್ಬಂದಿ ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರದೀಪ್​ ಗುಂಟಿ, ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಎಟಿಎಂಗೆ ಹಣ ತುಂಬುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಒಬ್ಬರನ್ನು ಕೊಂದಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಣದ ಟ್ರಂಕ್ ತೆರೆದಿದ್ದಾರೆ ಎಂಬ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

https://www.vijayavani.net/dk-shivakumar-slams-satish-jarakiholi-over-his-statement-about-kpcc-chief-post

https://www.vijayavani.net/actor-darshan-responds-to-police-notice-regarding-gun-license-cancellation