ಜಿಲ್ಲೆ

ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಇನ್ನೊಬ್ಬ ಆರೋಪಿಯ ಬಂಧನ..

Webdesk - Ravikanth

ಮೈಸೂರು: ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಆರೋಪಿಗಳ ಸಂಖ್ಯೆ ಏಳಕ್ಕೆ ತಲುಪಿದೆ.

ಈ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಅವರು ನೀಡಿದ್ದ ಸುಳಿವಿನ ಮೇರೆಗೆ ಏಳನೇ ಆರೋಪಿಯ ಸುಳಿವನ್ನೂ ಪಡೆದು ಬಂಧಿಸಿದ್ದಾರೆ. ಈಗಾಗಲೇ ಬಂಧಿಸಲಾಗಿರುವ ಆರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿದ್ದು, ಪೊಲೀಸರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಏಳನೇ ಆರೋಪಿಯನ್ನೂ ಬಂಧಿಸಿರುವ ಪೊಲೀಸರು ನಾಳೆ ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆದು ಇನ್ನಷ್ಟು ವಿಚಾರಣೆ ನಡೆಸಲಿದ್ದಾರೆ. ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಆರೋಪಿಗಳ ಬಂಧನ ಆದಂತಾಗಿದೆ.