ಜಿಲ್ಲೆ

Cylinder ಬ್ಲಾಸ್ಟ್​ ಕೇಸ್​; ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 5 ಕ್ಕೆ ಏರಿಕೆ

ಹುಬ್ಬಳ್ಳಿ: ಡಿಸೆಂಬರ್​ 22ರಂದು ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (Cylinder Blast Case) ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಮೃತರನ್ನು ಹುಬ್ಬಳ್ಳಿಯ ಉಣಕಲ್​ ನಿವಾಸಿ ಶಂಕರ ಚವ್ಹಾಣ್ (30) ಎಂದು ಗುರುತಿಸಲಾಗಿದ್ದು, ಕಿಮ್ಸ್​ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್​ಬಾಯ್​ ಆಗಿ ಕೆಲಸ ಮಾಡುತ್ತಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಂಕರ್​ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಡಿಸೆಂಬರ್ 29) ಕೊನೆಯುಸಿರು ಎಳೆದಿದ್ದಾರೆ.

ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವಳ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಜೆ ಸಿಲಿಂಡರ್ ಸ್ಫೋಟ (Cylinder Blast) ಸಂಭವಿಸಿತ್ತು. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (30) ಮೃತಪಟ್ಟಿದ್ದರು.

ಘಟನಯಲ್ಲಿ ಮಂಜುನಾಥ್ ವಾಗ್ಮೋಡೆ, ಪ್ರಕಾಶ್ ಬಾರಕೇರ್, ವಿನಾಯಕ ಬಾರಕೇರ್​, ತೇಜಸ್ವರ್ ಸಾತರೆಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.