??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಒನ್​ ನೇಷನ್​, ಒನ್​ ಎಲೆಕ್ಷನ್​ ಸಾಧ್ಯವಿಲ್ಲ

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು: ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಎಂದಿಗೂ ಸಾಧ್ಯವಿಲ್ಲ ಎಂದು ಮಾಜಿ ಅಡ್ವೊಕೇಟ್​ ಜನರಲ್​ ಪ್ರೊ.ರವಿವರ್ಮಕುಮಾರ್​ ಹೇಳಿದರು.

ತುಮಕೂರು ವಿವಿ ಕಲಾ ಕಾಲೇಜು ಹಾಗೂ ನೆಲಸಿರಿ ಸಾಂಸತಿಕ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಜಿ.ಶ್ರೀನಿವಾಸಕುಮಾರ್​ ನೆನಪಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್​ಎಸ್​ಎಸ್​ ಸೇರಿ ತಮಗೆ ಮತ ನೀಡಿದ ದಕ್ಷಿಣ ಭಾರತವನ್ನು ವಾರ್ಮ ಮಾರ್ಗದಿಂದ ತಮ್ಮ ಕಪಿಮುಷ್ಟಿಗೆ ತೆಗೆದುಕೊಳ್ಳಲು ನಡೆಸುತ್ತಿರುವ ಹುನ್ನಾರ ಇದಾಗಿದೆ ಎಂದರು.

ಒಂದು ದೇಶ, ಒಂದು ಭಾಷೆ ವಿಫಲವಾದಂತೆ, ಒಂದು ರಾಷ್ಟ್ರ ಒಂದು ಚುನಾವಣೆಯೂ ವಿಫಲ ವಾಗಲಿದೆ. ಹಾಗೆಯೇ ಸರ್ಕಾರದ ಅಂಗಗಳಾದ ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾದರೂ ನ್ಯಾಯಾಂಗದ ಮುಖ್ಯಸ್ಥರಾದ ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ಚಂದ್ರಚೂಡ ಅವರು ಗಣಪತಿ ಪ್ರತಿಷ್ಠಾಪನೆಗೆ ಪ್ರಧಾನಿಯವರನ್ನು ಬರಮಾಡಿ ಕೊಂಡು ಈ ದೇಶಕ್ಕೆ ಕೆಟ್ಟ ಸಂದೇಶ ನೀಡಿದ್ದಾರೆ. ಇದೊಂದು ಅಸಂವಿಧಾನಿಕ ಕ್ರಿಯೆ ಎಂದು ಅಸಮಾಧಾನ ಹೊರಹಾಕಿದರು.

ಡಾ.ಬಿ.ಆರ್​.ಅಂಬೇಡ್ಕರ್​ ಅವರ ಸಂವಿಧಾನದ ಆಶಯವನ್ನು ಸಮರ್ಪಕವಾಗಿ ಜಾರಿಗೆ ತರಲುವಲ್ಲಿ ಇದುವರೆಗೂ ಆಡಳಿತ ನಡೆಸಿದ ಎಲ್ಲಾ ರಾಜಕೀಯ ಪಕ್ಷಗಳು ವಿಫಲವಾಗಿವೆ. ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಅಂಬೇಡ್ಕರ್​ ಅವರು ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಅರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದರು.

ಸರ್ಕಾರಗಳು ಬಡವರಿಗಾಗಿ ಘೋಷಿಸುವ ಹಲವಾರು ಯೋಜನೆಗಳು ಅರ್ಥಿಕ ನ್ಯಾಯದ ಒಂದು ಭಾಗವೇ ಆಗಿವೆ. ರಾಜ್ಯದ ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ಈ ಸಾಲಿಗೆ ಸೇರುತ್ತವೆ. ಸ್ಥಳಿಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಜಾರಿ ರಾಜಕೀಯ ನ್ಯಾಯದ ಭಾಗವಾಗಿವೆ.ಆದರೆ ಇವುಗಳನ್ನು ಅರ್ಥ ಮಾಡಿಕೊಂಡು ಮುನ್ನೆಡೆದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ33ರ ಮೀಸಲಾತಿ ಎಂಬುದು ಕೇವಲ ಚುನಾವಣಾ ತಂತ್ರವಾಗಿದೆ. ಜನಸಂಖ್ಯಾ ಗಣತಿಯಾಗದೆ, ಕ್ಷೇತ್ರಗಳ ಪುನರವಿಂಗಡೆಣೆ ಆಗುವವರೆಗೂ ಮಹಿಳಾ ಮೀಸಲಾತಿ ಎಂಬುದು ಕನ್ನಡಿಯೊಳಗಿನ ಗಂಟು ಎಂದು ತಿಳಿಸಿದರು.

ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕರಿಯಣ್ಣ ಅಧ್ಯಕ್ಷತೆವಹಿಸಿದ್ದರು. ನೆಲಸಿರಿ ಸಾಂಸ್ಕತಿಕ ವೇದಿಕೆಯ ನಟರಾಜಪ್ಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದ್ಯಮಿ ಡಿ.ಟಿ.ವೆಂಕಟೇಶ್​, ವಕೀಲರಾದ ಎಚ್​.ವಿ.ಮಂಜುನಾಥ್​, ಚಿಂತಕ ಕೆ,ದೊರೆರಾಜು, ಡಾ.ಬಸವರಾಜು, ನೆಲಸಿರಿ ಸಾಂಸ್ಕತಿಕ ವೇದಿಕೆ ಅಧ್ಯಕ್ಷ ಗಂಗಾಧರ ಬೀಚನಹಳ್ಳಿ, ಕಾರ್ಯದರ್ಶಿ ಮಲ್ಲಿಕಾ ಬಸವರಾಜು, ಪ್ರಿಯಾಂಕ ಉಪಸ್ಥಿತರಿದ್ದರು.

ವಿಜೇತರಿಗೆ ಬಹುಮಾನ ವಿತರಣೆ

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಾದ ಅರ್​.ಮಧುಸೂಧನ್​, ಸಮೀನ ಬಾನು, ಜಿ.ಅನುಷಾ, ಎಚ್​.ಜಿ. ಮಮತ ಹಾಗೂ ಪದವಿಪೂರ್ವ ವಿಭಾಗದಲ್ಲಿ ಕರಿಯಣ್ಣ, ಸೋಮರೆಡ್ಡಿ, ಡಿ.ಕೆ.ಕಾವ್ಯ, ವಿ.ಎನ್​.ಅಪೇಕ್ಷಗೆ ಬಹುಮಾನ ನೀಡಿ ಗೌರವಿಸಲಾಯಿತು.