ಮಂಗಳೂರು: ಅಖಿಲ ಭಾರತೀಯ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಧಮ್ಕಿ ಹಾಕಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ.
ದೇವಾಲಯಗಳನ್ನು ಸರ್ಕಾರ ಕೆಡವುತ್ತಿರುವ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಧರ್ಮೇಂದ್ರ, ಪರೋಕ್ಷವಾಗಿ ಮುಖ್ಯಮಂತ್ರಿಯವರಿಗೇ ಎಚ್ಚರಿಕೆ ನೀಡಿದ್ದರು. ನಿನ್ನೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಗಾಂಧಿಯನ್ನೇ ಹತ್ಯೆ ಮಾಡಿರುವ ನಾವು ಬೇರೆಯವರನ್ನು ಬಿಡ್ತೀವಾ? ಎಂಬುದಾಗಿ ಹೇಳಿದ್ದರು. ಈ ಹೇಳಿಕೆ ಸಂಬಂಧವಾಗಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸುವಂತೆ ಆದೇಶವಿದೆ. ಅದಾಗ್ಯೂ ದೇವಾಲಯ ಕೆಡವಿದ್ದಕ್ಕೆ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕಿರುವವರನ್ನು ಹಾಗೂ ರಾಷ್ಟ್ರಪಿತ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಬಂಧಿಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರಿಂದ ದೂರು ನೀಡಲಾಗಿತ್ತು.