ಜಿಲ್ಲೆ

ಇತಿಹಾಸ ಅರಿತಾಗಲೇ ವರ್ತಮಾನ ಗ್ರಹಿಸಲು ಸಾಧ್ಯ

ಇಂದಿರಾ ಎನ್ ಕೆ

ಕುಂದಾಪುರ: ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿಯಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅತ್ಯಮೂಲ್ಯವಾದ ಸಮಯವನ್ನು ದ್ವೇಷಿಸಲು ಬಳಸಬೇಡಿ, ಇತಿಹಾಸವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ, ಇತಿಹಾಸವನ್ನು ಅರಿತಾಗ ಮಾತ್ರ ವರ್ತಮಾನವನ್ನು ಸರಿಯಾಗಿ ಗ್ರಹಿಸಲು ಸಾಧ್ಯವಾಗುತ್ತದೆ. ಅಂಕಗಳಿಕೆಗೆ ಆದ್ಯತೆ ನೀಡುವುದಕ್ಕಿಂತ ವ್ಯಕ್ತಿತ್ವ ರೂಪಿಸಿಕೊಳ್ಳುವುದು ಮುಖ್ಯ ಎಂದು ಹೇಳಿದರು.

ಧಾರ್ಮಿಕ ಮುಂದಾಳು ಅನಿಲ್ ಶೆಟ್ಟಿ ಮೊಳಹಳ್ಳಿ, ಕುಂದ ಕನ್ನಡ ಅಧ್ಯಯನ ಪೀಠದ ಸದಸ್ಯರಾದ ಕೆ.ಸಿ.ರಾಜೇಶ್, ದಿವಾಕರ್ ಶೆಟ್ಟಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲ ರಂಜನ್ ಶೆಟ್ಟಿ, ಮುಖ್ಯಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು.

ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್‌ಕುಮಾರ್ ನಿರೂಪಿಸಿದರು. ಶಾಲೆ ಹಾಗೂ ಕಾಲೇಜಿನ ಭೋದಕ ಹಾಗೂ ಭೋದಕೇತರ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.