ಜಿಲ್ಲೆ

ಕೊಡವ ಸಮಾಜದ ಪುತ್ತರಿ ನಮ್ಮೆರ ಊರೊರ್ಮೆ ಸಮಾರಂಭ

ಸುನಿಲ್ ಪೊನ್ನೇಟಿ

ಮಡಿಕೇರಿ:

ಮಡಿಕೇರಿ ಕೊಡವ ಸಮಾಜದ ಪುತ್ತರಿ ನಮ್ಮೆರ ಊರೊರ್ಮೆ ಸಮಾರಂಭ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪÀ ಅಧ್ಯಕ್ಷತೆಯಲ್ಲಿ ಸಮಾಜದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಪೆಮ್ಮಡ ಎ. ಮಂದಣ್ಣ ಮಾತನಾಡಿ, ಕೊಡಗಿನ ಮೂಲ ಸಂಪ್ರದಾಯದ ಪುತ್ತರಿ ಹಾಗೂ ಕೈಲ್‌ಪೊಳ್ದ್ ಹಬ್ಬದ ಆಚರಣೆಯ ಹಿಂದೆ ಸಾಂಪ್ರದಾಯಿಕ ಭತ್ತದ ಕೃಷಿಯೇ ಮೂಲವಾದರೂ ಇಂದು ಮರೆಯಾಗುತ್ತಿರುವುದು ವಿಷಾದನೀಯ. ಭತ್ತದ ಕೃಷಿ ಇಲ್ಲದೆ ಹಬ್ಬ ಆಚರಣೆ ಅರ್ಥಹೀನ ಆದರಿಂದ ಸಂಘ ಸಂಸ್ಥೆಗಳು, ಸಮಾಜಗಳು ಭತ್ತದ ಕೃಷಿಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದರು.

ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ ಮಾತನಾಡಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬAತೆ ಒಗ್ಗಟ್ಟು ಇದ್ದರೆ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಮರಗೋಡುವಿನ ಕಟ್ಟೆಮಾಡುವಿನ ಮಹಾ ಮೃತ್ಯುಂಜಯ ದೇವಾಲಯದ ವಾರ್ಷಿಕ ಉತ್ಸವದಲ್ಲಿ ಕೊಡವರ ಉಡುಪನ್ನು ಅವಮಾನಿಸಿರುವುದು ಖಂಡನೀಯ. ಕೊಡವ ಜನಾಂಗದ ಮೇಲೆ ಇಂತಹ ಹಲವು ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಎಲ್ಲರ ಸಹಕಾರದಿಂದ ಮಡಿಕೇರಿ ಕೊಡವ ಸಮಾಜ ಅಭಿವೃದ್ಧಿ ಜತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ ಎಂದರು.

ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಇದೇ ವೇಳೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ದೇವರ ನೆಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕಾರದ ಕನ್ನಂಡ ಕವಿತಾ ಬೊಳ್ಳಪ್ಪ, ನಂದಿನೆರವAಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮಂಡಿರ ಸದಾ ಮುದ್ದಪ್ಪ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಮೂವೇರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೆರ ಲಲ್ಲು ಕುಟ್ಟಪ್ಪ ವೇದಿಕೆಯಲ್ಲಿದ್ದರು.

ಮದ್ಯಾಹ್ನದ ನಂತರ ತಳಿಯಕ್ಕಿ ದೀಪದೊಂದಿಗೆ ಕಾವೇರಿ ಕೇರಿಯವರು ಮ್ಯಾನ್ಸ್ ಕಾಂಪೌAಡ್ ನಲ್ಲಿರುವ ಪುರಾತನ ಪುತ್ತರಿ ಕೋಲ್ ಮಂದ್ ಸ್ವಾಗತಿಸಿದರು. ನಂತರ ಕೋಲಾಟ್, ಬೊಳಕಾಟ್ ಹಾಗೂ ಮಹಿಳೆಯರ ಉಮ್ಮತಾಟ್, ವಾಲಗತಾಟ್ ಪ್ರದರ್ಶನ ನೆರವೇರಿತು. ಈ ಕಾರ್ಯಕ್ರಮದಲ್ಲಿ ಸಮಾಜದ ಸದಸ್ಯರು, ಮಡಿಕೇರಿಯ ಕೊಡವ ಕೇರಿಯವರು, ಪೊಮ್ಮಕ್ಕಡ ಕೂಟದ ಸದಸ್ಯರು ಭಾಗವಹಿಸಿದರು.