ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮಾಡುವಂತೆ ಇಲ್ಲಿನ ರೋಟರಿ ಸೆಂಟ್ರಲ್ ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ನೇತೃತ್ವದಲ್ಲಿ ರೋಟರಿ ಸೆಂಟ್ರಲ್ ವತಿಯಿಂದ ಮನವಿ ಸಲ್ಲಿಸಲಾಯಿತು. ಸಾಧು ನಂದೀಶ್, ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ, ಸಿದ್ದೇಗೌಡ ಇದ್ದರು.  
ಜಿಲ್ಲೆ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ತೆರೆಯಿರಿ

ಕೆ.ಎಂ.ದೊಡ್ಡಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ನೇತೃತ್ವದಲ್ಲಿ ಇಲ್ಲಿನ ರೋಟರಿ ಸೆಂಟ್ರಲ್ ವತಿಯಂದ ಮನವಿ ಸಲ್ಲಿಸಲಾಯಿತು.

ಡಿಎಚ್‌ಒ ಡಾ.ಮೋಹನ್ ಮಾತನಾಡಿ, ರೋಟರಿ ಸಂಸ್ಥೆಯು ಡಯಾಲಿಸಿಸ್ ಯಂತ್ರ ನೀಡುವುದಾಗಿ ತಿಳಿಸಿದ್ದು, ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಪ್ರಸ್ತುತ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಆಸ್ಪತ್ರೆಗಳಿಗೆ ಡಯಾಲಿಸಿಸ್ ಯಂತ್ರ ಅಗತ್ಯವಿದೆ. ಹಾಗಾಗಿ ಮದ್ದೂರು-ಮವಳ್ಳಿಯಲ್ಲಿ ಯಂತ್ರ ಅಳವಡಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.

ಭಾರತೀ ಹೆಲ್ತ್ ಸೈನ್ಸ್‌ಸ್ ನಿದೇಶಕ ಡಾ.ತಮಿಜ್‌ಮಣಿ, ರೋಟರಿ ಸೆಂಟ್ರಲ್ ಅಧ್ಯಕ್ಷ ಸಾಧು ನಂದೀಶ್, ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ, ಸಿದ್ದೇಗೌಡ ಸೇರಿದಂತೆ ಹಲವರಿದ್ದರು.