ಯಾದಗಿರಿ: 2025ರ ಏಪ್ರಿಲ್ 24 ರಿಂದ 2025ರ ಮೇ 8ರ ವರೆಗೆ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-2ನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳಿಗೆ ಜಾಗೃತದಳ ನೇಮಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2ನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷೆಯ ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಅಧಿಕಾರಿಗಳನ್ನು ಈ ಪರೀಕ್ಷಾ ಕೇಂದ್ರಗಳ ಜಾಗೃತದಳ ನೇಮಕ ಮಾಡಿ ಆದೇಶಿಸಲಾಗಿದೆ. ಪರೀಕ್ಷೆ ಕೇಂದ್ರಗಳು ಶಹಾಪೂರ ತಾಲ್ಲೂಕು ಶಹಾಪೂರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜುಗೆ ದೋರನಹಳ್ಳಿ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಶ್ರೀ ಆಕಾಶರೆಡ್ಡಿ ಮೊ.ನಂ.8277935672ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.