ಜಿಲ್ಲೆ

ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ ಉತ್ತಮ ಬೆಳವಣಿಗೆ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ ದಾನಿಗಳು, ಹಳೇ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಶಿಕ್ಷಕರ ಸತತ ಪರಿಶ್ರಮದ ಫಲವಾಗಿ ಶಾಲೆಯ ಬೆಳವಣಿಗೆ ಸಾಧ್ಯವಿದೆ. ಪಾಲಕರಿಗೆ ಇಂದು ತಮ್ಮ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಬೇಕೆಂಬ ಆಸೆ ಇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ವಾಧ್ಯಮಕ್ಕೆ ಅವಕಾಶ ನೀಡಿರುವುದು ಸರ್ಕಾರಿ ಶಾಲೆಯ ಉಳಿವು ಹಾಗೂ ಬೆಳವಣಿಗೆಗೆ ಪೂರಕವಾಗಿದೆ ಎಂದು ಅಂಪಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕಿಣಿ ಹೇಳಿದರು. ಅಂಪಾರು ಮೂಡುಬಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ನೂತನವಾಗಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ವಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ದಿನಕರ ಶೆಟ್ಟಿ ಶಾನ್ಕಟ್ಟು ಅಧ್ಯಕ್ಷತೆ ವಹಿಸಿದರು. ಹಳೇ ವಿದ್ಯಾರ್ಥಿ ಸಂ ವತಿಯಿಂದ ಎಲ್‌ಕೆಜಿ, ಯುಕೆಜಿ, 1ನೇ ತರಗತಿ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯ ಹಾಗೂ ನೋಟ್ಸ್ ಪುಸ್ತಕಗಳನ್ನು ವಿತರಿಸಲಾಯಿತು. ಎಸ್‌ಡಿಎಂಸಿ ಉಪಾಧ್ಯಕ್ಷೆ ಪ್ರಭಾವತಿ ನಾಯ್ಕ, ಅಂಪಾರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವನಜಾ, ಸದಸ್ಯ ಕಿರಣ್ ಕೊಡ್ಗಿ ಅಂಪಾರು, ಸದಸ್ಯೆ ಶಕೀಲಾ ಭೋವಿ, ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ಮನೋಹರ್ ಶೆಟ್ಟಿ ಮೂಡುಬಗೆ, ಕಾರ್ಯದರ್ಶಿ ರಮೇಶ್ ಕನ್ನಾಲಿ, ಎಸ್‌ಡಿಎಂಸಿ ಸದಸ್ಯ ವ್ನಿೇಶ್ವರ, ರವಿ ಕುಲಾಲ, ಮುಖ್ಯಶಿಕ್ಷಕ ಮಂಜುನಾಥ ಶೆಟ್ಟಿ, ಸಹ ಶಿಕ್ಷಕರು, ಹಳೇ ವಿದ್ಯಾರ್ಥಿಗಳು, ಮಕ್ಕಳ ಪಾಲಕರು ಉಪಸ್ಥಿತರಿದ್ದರು. ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ ಮನೋಹರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಸುಧಾ ವಂದಿಸಿದರು, ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ವಾಧ್ಯಮ ಶಿಕ್ಷಣ ಪಡೆಯಲು ಅವಕಾಶ ವಾಡಿಕೊಡಲಾಗಿದೆ. ಮಕ್ಕಳಿಗೆ ಶಾಲಾ ಬಸ್ ಸೇರಿದಂತೆ ಇನ್ನಿತರ ಉಚಿತ ಸೌಲಭ್ಯಗಳ ವ್ಯವಸ್ಥೆಯಿದೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು. ಮನೋಹರ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂ ಅಧ್ಯಕ್ಷ https://www.vijayavani.net/world-environment-day-celebrated-in-pandeshwar https://www.vijayavani.net/students-should-be-studious-2