ಜಿಲ್ಲೆ

ಗ್ರಾಪಂ ಮಟ್ಟದಲ್ಲಿ ಪ್ರದಗ್ರಹಣ ಸಮಾರಂಭ ವೀಕ್ಷಿಸಲು ಅವಕಾಶ

ಯಳಂದೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭವನ್ನು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಗ್ರಾಮದಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಜಿ ಶಾಸಕ ಎಸ್.ಬಾಲರಾಜು ಹೇಳಿದರು.

ಈ ಸಂಬಂಧ ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಸಾರ್ವಜನಿಕ ಸಭೆ ಮಾಡುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಮಾಧ್ಯಮದ ಮೂಲಕ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲು ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ಪೂರ್ವಸಿದ್ಧತೆ ಮಾಡಿಕೊ ಳ್ಳಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕರ್ತರು ಪರಸ್ಪರ ಅಂತರ ಕಾಯ್ದುಕೊಳ್ಳುವುದರ ಜತೆಗೆ ಮಾಸ್ಕ್ ಧರಿಸಿರಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕೆಪಿಸಿಸಿ ವೀಕ್ಷಕ ಎಚ್.ಸಿ.ಬಸವರಾಜು, ಜಿಪಂ ಸದಸ್ಯ ಜೆ.ಯೋಗೇಶ್ ತಾಪಂ ಸದಸ್ಯ ನಿರಂಜನ್, ಮಾಜಿ ಅಧ್ಯಕ್ಷ ಮಹೇಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ. ಚಂದ್ರು, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಬಸವಶೆಟ್ಟಿ ಹಲವರು ಹಾಜರಿದ್ದರು.