ಜಿಲ್ಲೆ

ಸುಧಾರಣೆ ಮಾಡಿ, ಖಾಸಗೀಕರಣವನ್ನಲ್ಲ ; ವಿದ್ಯುತ್ ಕಾಯ್ದೆ ತಿದ್ದುಪಡಿಗೆ ನೌಕರರ ವಿರೋಧ

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ವಿದ್ಯುತ್ ಸುಧಾರಣಾ ಕಾಯ್ದೆಯ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಇಲ್ಲಿನ ಬೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಗ್ರಾಹಕರಿಗೆ ಉತ್ತಮ ಸೇವೆ, ನೌಕರರಿಗೆ ಸಮರ್ಪಕ ಸವಲತ್ತುಗಳನ್ನು ಒದಗಿಸಲು ಇಲಾಖೆಯಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾದ ಸರ್ಕಾರ, ಖಾಸಗೀಕರಣದ ಮೂಲಕ ಹೊಡೆತ ನೀಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ನೌಕರರಿಗೆ ಉದ್ಯೋಗ ಅಭದ್ರತೆ, ಗ್ರಾಹಕರಿಗೆ ದುಬಾರಿ ಸೇವೆ ನಾನಾ ಸಮಸ್ಯೆಗಳು ಎದುರಾಗುತ್ತವೆ. ಇದಕ್ಕೆ ಅವಕಾಶ ನೀಡದೆ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ, ಕಾರ್ಮಿಕರ ವಿರೋಧಿ ನೀತಿ ಜಾರಿಯ ನಿಲುವು ಬದಲಾಯಿಸುವಂತೆ ಒತ್ತಾಯಿಸಿದರು.

ನೌಕರರ ಸಂಘದ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಶ್ರೀನಿವಾಸ್, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ನಾಗರಾಜ್, ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣ ನೌಕರರ ವಿಭಾಗದ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯ ವಿ.ಶ್ರೀನಿವಾಸ್, ಲೆಕ್ಕಾಧಿಕಾರಿಗಳ ಸಂಘದ ಪದಾಧಿಕಾರಿ ಜಿ.ನಾರಾಯಣಸ್ವಾಮಿ, ಎಂಜಿನಿಯರ್ ಸಂಘದ ಪದಾಧಿಕಾರಿ ವಾಸುದೇವ್ ಮತ್ತಿತರರು ಇದ್ದರು.