ಜಿಲ್ಲೆ

ಸಾವಿರಾರು ಮನೆ ಹಾಳು ಮಾಡಿದ ವಿರೋಧ ಪಕ್ಷಗಳು:ಡಿಸಿಎಂ ಡಿಕೆಶಿ ಕಿಡಿ

ಬೆಂಗಳೂರು: ಅಧಿಕಾರದಲ್ಲಿದ್ದಾಗ ಜನಪರ ಯೋಜನೆ ಜಾರಿಗೆ ತರಲು ವಿಲವಾಗಿರುವ ವಿರೋಧ ಪಕ್ಷಗಳು, ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ "ಗ್ಯಾರಂಟಿ ಯೋಜನೆಗಳ'ನ್ನು ಸಹಿಸದೆ ಸುಖಾ ಸುಮ್ಮನೆ ಆರೋಪ ಮಾಡುತ್ತಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕ-ತಂಗಿ, ಅಪ್ಪ-ಮಗ-ಮಕ್ಕಳ ನಡುವೆ ಜಗಳ ತಂದು ಭಾವನೆಗಳ ಮೇಲೆ ಆಟವಾಡುವ ವಿರೋಧಪಕ್ಷಗಳು ಎಷ್ಟೋ ಮನೆಗಳನ್ನು ಒಡೆದು ಹಾಕಿವೆ. ಶಕ್ತಿ ಯೋಜನೆ ಕುರಿತು ಶೇ.5-10 ರಷ್ಟು ಮಹಿಳೆಯರ ಅಭಿಪ್ರಾಯ ಹೇಳಿದ್ದೇನೆ ಹೊರತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಒಂದಷ್ಟು ಜನ ಮಹಿಳೆಯರು ಟಿಕೆಟ್​ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರೂ ಕಂಡಕ್ಟರ್​ ಹಣ ತೆಗೆದುಕೊಳ್ಳಲು ಹೆದರುತ್ತಿದ್ದಾರೆ.ಈ ಬಗ್ಗೆ ಯೋಚನೆ ಮಾಡಬೇಕಿದೆ ಎಂದಷ್ಟೇ ಹೇಳಿದ್ದೇನೆ ಎಂದು ಶುಕ್ರವಾರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಮಲ್ಲಿಕಾರ್ಜುನ ರ್ಖಗೆ ಮಾತನಾಡಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ವಿರೋಧ ಪದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರ ಹಾಳು ಮಾಡುತ್ತಿವೆ ಎಂದು ವಿರೋಧ ಪಕ್ಷಗಳು ಹೇಳಿವೆ ಎಂದು ರ್ಖಗೆ ಹೇಳಿದ್ದರು. ರ್ಖಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ಶಕ್ತಿ ಯೋಜನೆ ವಿಚಾರವಾಗಿ ನಾನು ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರೂ ಆಲಿಸಿಕೊಂಡು ನೋಡಿ ಎಂದರು.

ಮಲ್ಲಿಕಾರ್ಜುನ ರ್ಖಗೆ ಅವರು ಒಗ್ಗಟ್ಟಾಗಿ ಇರಿ ಎನ್ನುವ ಸಂದೇಶ ಕೊಟ್ಟಿದ್ದು ಯಾವ ಕಾರಣಕ್ಕೆ ಎಂಬ ಪ್ರಶ್ನೆಗೆ ಉತ್ತರಿಸಿ ಡಿಕೆಶಿ, ವಿವಿಧ ಸಂದರ್ಭಗಳನ್ನು ವಿವರಿಸಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ನಾನು ಅಧ್ಯನಾದ ಹಾಗೂ ಡಿಸಿಎಂ ಆದ ನಂತರ ಪ,ಸರ್ಕಾರದಲ್ಲಿ ಯಾವುದಾದರೂ ಅಹಿತಕರ ಟನೆಗಳು ನಡೆದಿವೆಯೇ? ಅಚ್ಚುಕಟ್ಟಾಗಿ ಸರ್ಕಾರ, ಪವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು. ಕೆಲ ನಾಯಕರು ದೆಹಲಿಗೆ ತೆರಳಿ ಭೇಟಿ ಮಾಡುತ್ತಿರುವ ಬಗ್ಗೆ ರ್ಖಗೆ ಅವರು ಪ್ರಸ್ತಾಪಿಸಿದ ಬಗ್ಗೆ ಕೇಳಿದಾಗ, ಯಾರೂ ದೆಹಲಿಗೆ ತೆರಳಿಲ್ಲ. ಯಾವುದೇ ವಿಚಾರದಲ್ಲೂ ರ್ಖಗೆ ಮಧ್ಯಪ್ರವೇಶ ಮಾಡಿಲ್ಲ. ಈವರೆಗೂ ಇಂತಹ ಟನೆ ನಡೆದಿಲ್ಲ. ಹಿರಿಯರಾಗಿ ಸಲಹೆ ನೀಡಿದ್ದಾರೆ. ರಾಷ್ಟ್ರ ರಾಜಕಾರಣದ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ್ದಾರೆ. ಮೀಸಲಾತಿ ವಿಚಾರವಾಗಿ ಒಂದೊಂದು ರಾಜ್ಯ ಒಂದೊಂದು ನೀತಿ ಅಳವಡಿಸಿಕೊಂಡಿವೆ. ಸ್ಥಳಿಯವಾಗಿ ನಿಮ್ಮ ನೀತಿ ಅಳವಡಿಸಿಕೊಳ್ಳಿ. ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ರ್ಖಗೆ ಹೇಳಿದ್ದಾರೆ ಎಂದು ಡಿಕೆಶಿ ತಿಳಿಸಿದರು.

ಪ್ರಮಾಣ ಪತ್ರ ವಿತರಣೆ: ಕರ್ನಾಟಕ ಏಕೀಕರಣಗೊಂಡು 69 ವರ್ಷ ಹಾಗೂ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಸಂಭ್ರಮದಲ್ಲಿದ್ದೇವೆ. ಸಾವಿರಕ್ಕೂ ಅಧಿಕ ಶಾಲಾ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ನೃತ್ಯ ಸೇರಿ ಇತರೆ ಕಾರ್ಯಕ್ರಮಗಳನ್ನು ಪ್ರಚುರಪಡಿಸಿದ್ದಾರೆ. ಎಲ್ಲ ಮಕ್ಕಳಿಗೆ ಪ್ರಮಾಣ ಪತ್ರ ನೀಡಬೇಕೆಂದು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಕೆಶಿ ಹೇಳಿದರು.