ಹೂವಿನಹಡಗಲಿ ತಾಲೂಕು ಹೊಳಲು ಗ್ರಾಮದ ಮಲ್ಲಿಕಾರ್ಜುನ ವಿರಕ್ತಮಠದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿಯ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಬೀಳಗಿಯ ಕಲ್ಮಠದ ಗುರುಪಾದ ಸ್ವಾಮೀಜಿ ಮಾತನಾಡಿದರು. ಕಪ್ಪತ್ತಗಿರಿ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ, ಚನ್ನಬಸವ ದೇವರು, ನಿವೃತ್ತ ಇಂಜಿನಿಯರ್ ಓದೋ ಗಂಗಪ್ಪ ಇತರರಿದ್ದರು. 
ಜಿಲ್ಲೆ

ಸಾವಯವ ಕೃಷಿ ಪದ್ಧತಿ ಅನುಸರಿಸಿ

ಹೂವಿನಹಡಗಲಿ: ನಿತ್ಯ ಆಹಾರದಲ್ಲಿ ಸಿರಿಧಾನ್ಯ ಹೆಚ್ಚಾಗಿ ಬಳಸಿದರೆ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಬೀಳಗಿ ಕಲ್ಮಠದ ಗುರುಪಾದ ಸ್ವಾಮೀಜಿ ಹೇಳಿದರು.

ತಾಲೂಕಿನ ಹೊಳಲು ಗ್ರಾಮದ ಮಲ್ಲಿಕಾರ್ಜುನ ವಿರಕ್ತಮಠದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಶರಣಬಸವೇಶ್ವರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಮನುಷ್ಯ ಯಾಂತ್ರಿಕ ಬದುಕಿಗೆ ಹೊಂದಿಕೊಂಡು ಸಂಸ್ಕೃತಿಯ ಹಿಂದಿನ ಆಹಾರ ಪದ್ಧತಿ ಮರೆಯುತ್ತಿದ್ದಾನೆ.

ಕೃಷಿಯಲ್ಲಿ ಹೆಚ್ಚಿನ ಪ್ರಮಾಣದ ರಾಸಾಯನಿಕ ವಸ್ತುಗಳು ಬಳಸುವ ಮೂಲಕ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದೇವೆ. ಸಾವಯವ ಕೃಷಿ ಪದ್ಧತಿ ಭೂಮಿ ಫಲವತ್ತತೆಗೆ ಸಹಕಾರಿಯಾಗಿದೆ ಎಂದರು.

ಕಪ್ಪತ್ತಗಿರಿ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಮನೆಯಲ್ಲಿ ನಿತ್ಯ ಬಳಸುವ ಆಹಾರ ಪದಾರ್ಥಗಳಲ್ಲಿ ಔಷಧೀಯಗುಣ ಹೆಚ್ಚಿದ್ದು, ಗಮನಿಸಬೇಕು. ಕುಟುಂಬವನ್ನು ಆರೋಗ್ಯವಾಗಿಡುವ ಜವಾಬ್ದಾರಿ ಮಹಿಳೆಯರ ಮೇಲಿದೆ ಎಂದರು.

ಹ್ಯಾರಡಾ ಗ್ರಾಮದ ಸಾವಯವ ಕೃಷಿಕ ಸಂಗಪ್ಪ ಚಕ್ರಸಾಲಿ ಅವರನ್ನು ಸನ್ಮಾನಿಸಲಾಯಿತು. ಬಸವನ ಬಾಗೇವಾಡಿಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಶ್ರೀಮಠದ ಚನ್ನಬಸವ ದೇವರು, ಗವಿಮಠ ಡಾ.ಹಿರಿಶಾಂತವೀರ, ನಿವೃತ್ತ ಇಂಜಿನಿಯರ್ ಓದೋ ಗಂಗಪ್ಪ ಇತರರಿದ್ದರು.